Thirthahalli Bandh Turns Violent, Police Lathi-Charged Against Protesters - TV9

  • 10 years ago
TV9 News: Thirthahalli Bandh Turns Violent, Police Lathi-Charged Against Protesters......,
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಬಂದ್ ಹಿಂಸಾರೂಪಕ್ಕೆ ತಿರುಗಿದೆ. ತೀರ್ಥಹಳ್ಳಿಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಹಲವರು ಗಾಯಗೊಂಡಿದ್ದು, ಮೂವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
…...........
ಅಕ್ಟೋಬರ್ 29ರ ಬೆಳಗ್ಗೆ ಶಾಲೆಗೆ ಹೊರಟಿದ್ದ ನಂದಿತಾಳನ್ನ, ಮೂವರು ದುಷ್ಕರ್ಮಿಗಳು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ, ಲೈಂಗಿಕ ಕಿರುಕುಳ ನೀಡಿ, ವಿಷಪ್ರಾಶನ ಮಾಡಿದ್ದರು ಎನ್ನಲಾಗಿದೆ. ಇದಾದ ಬಳಿಕ, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿದರಾದ್ರೂ, ನಂದಿತಾ ಬದುಕುಳಿಯಲಿಲ್ಲ. ಅಕ್ಟೋಬರ್ 31ರಂದು ಬಾಲಕಿ ನಂದಿತಾ, ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಈ ಘಟನೆ ಹಿನ್ನೆಲೆಯಲ್ಲಿ, ತೀರ್ಥಹಳ್ಳಿಯಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ನಂದಿತಾ ಅಂತ್ಯಕ್ರಿಯೆಗೂ ಮುನ್ನ ನಡೆದ ಮೆರವಣಿಗೆ ವೇಳೆ ಉದ್ರಿಕ್ತರು ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ರು. ಈಗ್ಲೂ ಕೂಡ, ತೀರ್ಥಹಳ್ಳಿಯಲ್ಲಿ ಬಿಗುವಿನ ವಾತಾವರಣವಿದೆ. ಸದ್ಯ ಮೂವರು ಆರೋಪಿಗಳ ಪೈಕಿ ಓರ್ವನನ್ನ ಬಂಧಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Karnataka, Shimoga, Thirthahalli, Rape and Murder, Teenager Rape and Murder, Student Rape, 14 Year Old Girl Raped Murdered, Nandita, High School girl dies, Student Dies after rape, Girl Dies after Rape, Thirthahalli Bandh, Bandh Turns Violent, Lathi Charge, Rape suspected, Protest against Rape and Murder, TV9, News, Videos..,

Recommended