ಸಿದ್ದರಾಮಯ್ಯ ಜನಪ್ರಿಯತೆ ಕಾಂಗ್ರೆಸ್ ಗೆ ಮತ ತರುತ್ತಾ ? | Oneindia Kannada

  • 7 years ago
ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಗುಜರಾತ್, ಹಿಮಾಚಲ ಪ್ರದೇಶ ರಾಜ್ಯಗಳ ನಂತರ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ರಾಜಕೀಯ ಪಕ್ಷಗಳು ಚುನಾವಣೆ ತಯಾರಿ ಆರಂಭಿಸಿವೆ. 2013ರ ಮೇ 5ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿತ್ತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡರು. ವಿವಿಧ ಭಾಗ್ಯಗಳ ಯೋಜನೆಗಳನ್ನು ಜಾರಿಗೆ ತಂದರು. 2018ರ ಚುನಾವಣೆ ಮೇ ತಿಂಗಳ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆ ಇದೆ...ಕಾಂಗ್ರೆಸ್ ನಮ್ಮ ಸರ್ಕಾರದ ಕಾರ್ಯಕ್ರಮಗಳು, ಪಾರದರ್ಶಕವಾದ ಆಡಳಿತದಿಂದಾಗಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ. 2018ರಲ್ಲಿಯೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದೆ. ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯಲು ತಂತ್ರ ರೂಪಿಸಿದ್ದು, ಮಿಷನ್ 150 ಎಂಬ ಕಾರ್ಯಕ್ರಮವನ್ನು ಆರಂಭಿಸಿದೆ...ಚುನಾವಣೆಗಿಂತ ಮೊದಲು ನಡೆಯುವ ಸಮೀಕ್ಷೆಯಲ್ಲಿ ಜನರು ರಾಜ್ಯದ ಜ್ವಲಂತ ಸಮಸ್ಯೆ ಯಾವುದು?, ಚುನಾವಣೆಯಲ್ಲಿ ಪಕ್ಷಗಳು ಯಾವ ವಿಷಯಕ್ಕೆ ಗಮನ ಕೊಡಬೇಕು ಎಂದು ಅಭಿಪ್ರಾಯಪಡುತ್ತಾರೆ. ಈಗ ಕರ್ನಾಟಕದಲ್ಲಿ ಸಮೀಕ್ಷೆ ನಡೆಸಿದರೆ ಯಾವ ವಿಚಾರವನ್ನು ಜನರ ಮುಂದಿಡಬಹುದು ಎಂಬದಕ್ಕೆ ಈ ವೀಡಿಯೋ ನೋಡಿ...

Recommended