ರವಿ ಬೆಳಗೆರೆ ಬಂಧನ | ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ

  • 7 years ago
ಇಡೀ ದೇಶದ್ಯಾಂತ ಸುದ್ದಿ ಮಾಡಿದ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಹಾಯ್ ಬೆಂಗಳೂರ್ ಸಂಪಾದಕ- ಪತ್ರಕರ್ತ ರವಿ ಬೆಳಗೆರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಸಿದ್ದಾರೆ. ರವಿ ಬೆಳಗೆರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆ ಉತ್ತರಿಸಿದ ಸಿದ್ದರಾಮಯ್ಯ, " ರವಿ ಬೆಳಗೆರೆಯವರನ್ನು ಏತಕ್ಕಾಗಿ ಬಂಧಿಸಿದ್ದಾರೆಂದು ಗೊತ್ತಿಲ್ಲ. ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ" ಎಂದರು. ರವಿ ಬೆಳಗೆರೆ ಬಂಧನದ ಬಗ್ಗೆ ಪೊಲೀಸರೊಂದಿಗೆ ಮಾತನಾಡಿಲ್ಲ ಮತ್ತು ಯಾವುದೇ ಚರ್ಚಿಸಿಲ್ಲ. ಏನೇ ಇದ್ದರೂ ಪೊಲೀಸರೂ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದರು. ಶಶಿಧರ ಮುಂಡೆವಾಡಗಿ ಎಂಬಾತನನ್ನು ಡಿಸೆಂಬರ್ 07ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆತ ರವಿ ಬೆಳಗೆರೆ ಅವರು ಸುಪಾರಿ ನೀಡಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆ. ಈ ಹಿನ್ನೆಯಲ್ಲಿ ರವಿ ಬೆಳಗೆರೆಯವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
Finally C M Siddaramaiah reacts on Ravi Belegere arrest

Recommended