ಪೋಸ್ಟಲ್ ಅಸಿಸ್ಟೆಂಟ್ ಸೇರಿದಂತೆ 3259 ಹುದ್ದೆಗಳಿಗೆ ಅರ್ಜಿ ಆಹ್ವಾನ | Oneindia Kannada

  • 6 years ago
ಬೆಂಗಳೂರು, ಡಿಸೆಂಬರ್ 5: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ ಎಸ್ ಸಿ) ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿ ಹೆಚ್ ಎಸ್ ಎಲ್) ಒಟ್ಟು 3259 ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.ಐಟಿಐ ಟೆಲಿಕಾಂ ಕಂಪನಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಲೋಯರ್ ಡಿವಿಷನ್ ಕ್ಲರ್ಕ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಗ್ರೇಡ್ 'ಎ' ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 18 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.ಅರ್ಜಿಗಳನ್ನು ಆನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ಹುದ್ದೆಗೆ ಒಂದೇ ಅರ್ಜಿ ಸಲ್ಲಿಸಲು ಸೂಚಿಸಲಾಗಿದ್ದು, ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರು. ಪ.ಜಾ/ಪ.ಪಂ/ಮಹಿಳೆ/ಮಾಜಿ ಸೈನಿಕ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು. ಹುದ್ದೆಗಳ ವಿವರ, ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿ ಸೇರಿದಂತೆ ಹಲವು ಮಾಹಿತಿಗಳಿಗಾಗಿ ಈ ವಿಡಿಯೋ ನೋಡಿ
SSC CHSL recruitment 2017 notification has been released on official website for the recruitment of total 3259, jobs out of which 898 vacancies for Lower Division Clerk/Junior Secretariat Assistant, 2359 for Postal Assistant/Sorting Assistant & 02 for Data Entry Operator vacancies. Job seekers should apply from 18th November 2017 and before 18th December 2017.

Recommended