ರವಿ ಬೆಳಗೆರೆಗೆ ಸೆಷನ್ಸ್ ನ್ಯಾಯಾಲಯದಿಂದ ಮಧ್ಯಂತರ ಜಾಮೀನು ಮಂಜೂರು | Oneindia Kannada

  • 6 years ago
Supari to Kill Sunil Case: Journalist Ravi Belagere gets interim conditional bail from Sessions Court. Court granted bail on medical grounds till December 16. Ravi Belagere is now under judicial custody.

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರಾಗಿದೆ.ಅನಾರೋಗ್ಯ ಹಾಗೂ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವುದರಲ್ಲಿ ಆಗಿರುವ ಲೋಪದ ಹಿನ್ನಲೆಯಲ್ಲಿ ಜಾಮೀನು ಮಂಜೂರು ಮಾಡಲಾಗಿದೆ. ಇಬ್ಬರ ಶ್ಯೂರಿಟಿ, 1 ಲಕ್ಷ ರು ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ವಿಧಿಸಲಾಗಿದೆ. ಡಿಸೆಂಬರ್ 16ರ ತನಕ ಜಾಮೀನು ನೀಡಲಾಗಿದೆ.ರವಿ ಬೆಳಗೆರೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸುವಂತೆ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿತ್ತು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರವಿ ಬೆಳಗೆರೆ ಅವರನ್ನು ಅನಾರೋಗ್ಯ ನಿಮಿತ್ತ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಯ ಮಧುಮೇಹ ವಿಭಾಗಕ್ಕೆ ಕರೆದೊಯ್ಯಲಾಗಿದೆ.ಇದಕ್ಕೂ ಮುನ್ನ ಅನಾರೋಗ್ಯ ಹಿನ್ನಲೆಯಲ್ಲಿ ರವಿ ಬೆಳಗೆರೆ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ರವಿ ಬೆಳಗೆರೆ ಅವರ ವಕೀಲ ದಿವಾಕರ್ ಅವರು ಅರ್ಜಿ ಸಲ್ಲಿಸಿದರು.

Recommended