ಪೆಟ್ರೋಲ್ ದರ ಹೆಚ್ಚಳದ ಬಗ್ಗೆ ರಾಜ್ಯಗಳ ಮೇಲೆ ಗೂಬೆ ಕೂರಿಸಿದ ಜೇಟ್ಲಿ | Oneindia Kannada

  • 6 years ago
ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ಅಡಿಯಲ್ಲೇ ತರಬೇಕು ಎಂಬ ಬಗ್ಗೆ ಕೇಂದ್ರ ಸರಕಾರಕ್ಕೂ ಒಲವಿದೆ. ಆದರೆ ರಾಜ್ಯಗಳ ಒಪ್ಪಿಗೆ ಪಡೆದ ನಂತರವಷ್ಟೇ ಆ ತೀರ್ಮಾನ ಸಾಧ್ಯ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಗಳವಾರ ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಕೇಂದ್ರಕ್ಕೇನೋ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ಅಡಿಯಲ್ಲಿ ತರಬೇಕು ಎಂಬುದಿದೆ. ನಾವು ರಾಜ್ಯಗಳ ಒಪ್ಪಿಗೆಗಾಗಿ ಕಾಯುತ್ತಾ ಇದ್ದೀವಿ. ಶೀಘ್ರದಲ್ಲೇ ಈಗಲ್ಲದಿದ್ದರೂ ನಂತರ ರಾಜ್ಯಗಳು ಈ ಪ್ರಸ್ತಾವವನ್ನು ಒಪ್ಪಿಕೊಳ್ಳಬಹುದು ಎಂಬ ಭರವಸೆ ಇದೆ ಎಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಜೇಟ್ಲಿ ಉತ್ತರಿಸಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳನ್ನೇನೂ ಜಿಎಸ್ ಟಿಯಿಂದ ಹೊರಗಿಟ್ಟಿಲ್ಲ, ಆದರೆ ಜಿಎಸ್ ಟಿ ಕೌನ್ಸಿಲ್ ನಲ್ಲಿ ನಾಲ್ಕನೇ ಮೂರು ಭಾಗದಷ್ಟು ಬಹುಮತದೊಂದಿದೆ ಒಪ್ಪಿಗೆ ಸಿಗಬೇಕಿದೆ ಅಷ್ಟೇ ಎಂದಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನ ಪಿ.ಚಿದಂಬರಂ ಕೇಳಿದ ಪೂರಕ ಪ್ರಶ್ನೆಗೆ ಉತ್ತರಿಸಿದ ಜೇಟ್ಲಿ, ಜಿಎಸ್ ಟಿಗೆ ಸಂಬಂಧಿಸಿದಂತೆ ಸಾಂವಿಧಾನಿಕ ತಿದ್ದುಪಡಿಗೆ ಸಲ್ಲಿಸಿದ ಕರಡಿನ ಪ್ರಸ್ತಾವನೆಯಲ್ಲಿ ಯುಪಿಎ ಸರಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಸೇರಿಸಿರಲಿಲ್ಲ.
Jaitley says that central government is in favor of bringing petroleum products under GST but state governments needs to oblige .

Recommended