ರಜಿನಿಕಾಂತ್ ತಮ್ಮ ರಾಜಕೀಯ ಪ್ರವೇಶವನ್ನ ಖಚಿತಪಡಿಸಿದ್ದಾರೆ | Filmibeat Kananda

  • 6 years ago
ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ರಾಜಕೀಯ ಪ್ರವೇಶವನ್ನು ಖಚಿತಪಡಿಸಿದ್ದಾರೆ.ಕಳೆದ ಮೇ ತಿಂಗಳಿನಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ್ದ ರಜನಿಕಾಂತ್ ಅವರು ನಂತರ ಈ ಬಗ್ಗೆ ಮೌನ ವಹಿಸಿದ್ದರು. ಹುಟ್ಟುಹಬ್ಬದ ದಿನದಂದು ಏನಾದರೂ ಶುಭ ಸುದ್ದಿ ಘೋಷಿಸುವರೇ ಎಂದು ಅಭಿಮಾನಿಗಳು ಎಂದಿನಂತೆ ಕಾದಿದ್ದರು. ಆದರೆ, ಹುಟ್ಟುಹಬ್ಬ ಆಚರಣೆಯಿಂದ ರಜನಿ ದೂರ ಉಳಿದಿದ್ದರು. ಆದರೆ, ಚೆನ್ನೈನ ರಾಘವೇಂದ್ರ ಹಾಲ್ ನಲ್ಲಿ ಅಭಿಮಾನಿಗಳ ಜತೆಗಿನ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾನುವಾರ(ಡಿಸೆಂಬರ್ 31)ದಂದು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದಾರೆ.ಸೂಪರ್ ಸ್ಟಾರ್ ರಜನಿ ಅವರ ಭಾಷಣದ ಮುಖ್ಯಾಂಶಗಳು:
* ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಹೊಸ ಪಕ್ಷವನ್ನು ಘೋಷಿಸಲಾಗುತ್ತದೆ. * ದೇವರ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ದೇವರ ಅಭಯ, ಅಭಿಮಾನಿಗಳ ಬೆಂಬಲ ಇದ್ದರೆ ಏನ್ನನ್ನೂ ಬೇಕಾದರೂ ಸಾಧಿಸಬಹುದು. * ಈಗಿನ ಭ್ರಷ್ಟ ವ್ಯವಸ್ಥೆಯನ್ನು ಬದಲಾಯಿಸಬೇಕಿದೆ. * ತಮಿಳುನಾಡಿನ ಎಲ್ಲಾ ವಿಧಾನಸಭೆ ಕ್ಷೇತ್ರ(234)ಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. * ನಮ್ಮ ಪಕ್ಷದಲ್ಲಿ ಅಕ್ಷರಸ್ಥರು, ಅನಕ್ಷರಸ್ಥರು ಎಲ್ಲರೂ ಇರುತ್ತಾರೆ.

Recommended