ಕರ್ನಾಟಕ ವಿಧಾನಸಭಾ ಚುನಾವಣೆ 2018 : ಬಿಜೆಪಿ ಟಿಕೆಟ್ ಹಂಚಿಕೆಗೆ 3 ಸೂತ್ರ | Oneindia Kannada

  • 6 years ago
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪಕ್ಷದ ನಾಯಕರಿಗೆ ಕಟ್ಟಪ್ಪಣೆ ನೀಡಿ ಹಲವು ತಿಂಗಳು ಕಳೆದಿದೆ. ಖುದ್ದಾಗಿ ಅವರು ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಹೈಕಮಾಂಡ್ ಮತ್ತು ರಾಜ್ಯ ನಾಯಕರು ಟಿಕೆಟ್ ಹಂಚಿಕೆಯತ್ತ ಗಮನ ಹರಿಸಿದ್ದಾರೆ. ಅಭ್ಯರ್ಥಿಗಳಿಗೆ ಟಿಕೆಟ್ ಕೊಡುವ ಬಗ್ಗೆ ಅಮಿತ್ ಶಾ ಅವರೇ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಈ ಬಗ್ಗೆ ರಾಜ್ಯ ನಾಯಕರಿಗೂ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

ಮೂರು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಅಮಿತ್ ಶಾ ಸಿದ್ಧತೆ ನಡೆಸುತ್ತಿದ್ದಾರೆ. ಯಾವ ಕ್ಷೇತ್ರದಲ್ಲಿಯೂ ಟಿಕೆಟ್‌ ವಿಚಾರಕ್ಕೆ ಗೊಂದಲ ಉಂಟಾಗಿ, ಅದರಿಂದ ಪಕ್ಷಕ್ಕೆ ಚುನಾವಣೆಯಲ್ಲಿ ಹಿನ್ನಡೆ ಉಂಟಾಗಬಾರದು ಎಂಬುದು ಅಮಿತ್ ಶಾ ಅವರ ಲೆಕ್ಕಾಚಾರ.

ಕಾಂಗ್ರೆಸ್ ಮತ್ತು ಜೆಡಿಎಸ್‌ ಪಕ್ಷಗಳಿಗಿಂತ ಮೊದಲು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ನಿರ್ಧರಿಸಿದೆ. ಆದರೆ, ವಲಸೆ ಬಂದ ನಾಯಕರಿಗೆ ಟಿಕೆಟ್, ಸಂಸದರು, ವಿಧಾನಪರಿಷತ್ ಸದಸ್ಯರಿಗೆ ಟಿಕೆಟ್ ನೀಡುವ ಕುರಿತು ಪಕ್ಷ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ...

BJP will play safe while issuing tickets for Karnataka assembly elections 2018. Party will release candidates list in three phase. BJP president Amit Shah will take final decision on candidate selection.

Recommended