ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದು ಗೆಲ್ಲುವುದು ಸುಲಭವಲ್ಲ! | Oneindia Kannada

  • 6 years ago
ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಗೆ ಪ್ರತಿಷ್ಠೆಯ ಪ್ರಶ್ನೆ. ಅದರಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಂತೂ ಪಕ್ಷವನ್ನು ಗೆಲ್ಲಿಸುವುದು ಮತ್ತು ತಾವು ನಿಂತ ಕ್ಷೇತ್ರದಲ್ಲಿ ಗೆಲ್ಲುವುದು ಎರಡೂ ಅತ್ಯಂತ ಮಹತ್ವದ್ದು. ಕೇವಲ ಬಿಜೆಪಿ, ಜೆಡಿಎಸ್ ಮಾತ್ರವಲ್ಲದೆ ಕಾಂಗ್ರೆಸ್ ನೊಳಗಿನ ಕೆಲವರೇ ಸಿದ್ದರಾಮಯ್ಯನವರನ್ನು ಸೋಲಿಸುವುದಕ್ಕೆ ಹೊಂಚು ಹಾಕುತ್ತಿದ್ದಾರೆ ಎಂಬೆಲ್ಲ ವದಂತಿಗಳ ನಡುವಲ್ಲಿ ಸಿದ್ದರಾಮಯ್ಯನವರ ಮೇಲೆ ಸಾಕಷ್ಟು ಒತ್ತಡ ಹೆಚ್ಚಿದೆ.

ಆದ್ದರಿಂದಲೇ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರೆ ಎಂಬುದು ಕುತೂಹಲ ಹುಟ್ಟಿಸಿದೆ. ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ತಮ್ಮ ಸ್ಪರ್ಧೆ ಎಂದು ಹಲವು ಬಾರಿ ಸಿದ್ದರಾಮಯ್ಯ ಸಾರ್ವಜನಿಕವಾಗಿಯೇ ಹೇಳಿದ್ದರೂ, ಕೊನೆಯ ಕ್ಷಣದಲ್ಲಿ ಬದಲಾವಣೆಗಳಾದರೂ ಅಚ್ಚರಿಯಿಲ್ಲ.

2013 ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಿದ್ದರಾಮಯ್ಯ, ಈ ಬಾರಿ ಆ ಕ್ಷೇತ್ರವನ್ನು ತಮ್ಮ ಮಗ ಯತೀಂದ್ರ ಅವರಿಗೆ ಬಿಟ್ಟು ಕೊಡುತ್ತಾರೆ ಎಂಬ ಸುದ್ದಿಯೂ ಕೇಳಿಬರುತ್ತಿದೆ.
This years Karnataka assembly elections is a question of Hauteur for Siddaramaiah and the constituency from which he'll be contesting will play a major role .

Recommended