ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಬಗ್ಗೆ ಭುಗಿಲೆದ್ದ ವಿವಾದ | Oneindia Kannada
  • 6 years ago
The Kukke Subramanya Temple is not only in Karnataka, but also the most popular place in whole of India. Now Kukke Subrahmanya temple is under controversy. There is a clash between mutt and temple. Watch this video to know more.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವು ಕರ್ನಾಟಕಕ್ಕೆ ಅಷ್ಟೇ ಅಲ್ಲ, ಇಡೀ ಭಾರತದಲ್ಲೇ ಬಹಳ ಖ್ಯಾತಿ ಪಡೆದ ಹಾಗೂ ಜನರು ನಂಬಿಕೆಯಿಂದ ನಡೆದುಕೊಳ್ಳುವ ಕ್ಷೇತ್ರ. ಈ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ, ಸರ್ಪ ಸಂಸ್ಕಾರ ಹಾಗೂ ಕಾಳಸರ್ಪ ದೋಷ ನಿವಾರಣೆ, ರಾಹು-ಕೇತು ದೋಷ ನಿವಾರಣೆ ಸೇರಿದಂತೆ ವಿವಿಧ ದೋಷಗಳಿಗಾಗಿ ಪೂಜೆ ಮಾಡಲಾಗುತ್ತದೆ. ಕುಮಾರಾದ್ರಿ ಅಥವಾ ಕುಕ್ಕೆ ಸುಬ್ರಹ್ಮಣ್ಯ ಇತ್ತೀಚಿನ ದಿನಗಳಲ್ಲಿ ಭಾರೀ ಸುದ್ದಿಯಾಗುತ್ತಿದೆ. ಸುಬ್ರಹ್ಮಣ್ಯ ದೇವಾಲಯ ಹಾಗೂ ಸುಬ್ರಹ್ಮಣ್ಯ ಸಂಪುಟ ನರಸಿಂಹ ಮಠದ ಮಧ್ಯದ ವಿವಾದ ಚರ್ಚೆಗೆ ಗ್ರಾಸವಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಸುಬ್ರಹ್ಮಣ್ಯ ಮಠ ಇಂದು ಆಸ್ತಿಕ ವರ್ಗದ ಮನಸ್ಸಿನಲ್ಲಿ ಹಲವಾರು ಗೊಂದಲಗಳನ್ನು ಹುಟ್ಟುಹಾಕಿದೆ.
Recommended