ಹೊಸ ಬಣ್ಣದಲ್ಲಿ ಬರ್ಗ್‌ಮನ್ ಸ್ಟ್ರೀಟ್ 125 ಪ್ರೀಮಿಯಂ ಸ್ಕೂಟರ್ ಬಿಡುಗಡೆಗೊಳಿಸಿದ ಸುಜುಕಿ ಮೋಟರ್ ಸೈಕಲ್ಸ್

  • 4 years ago
ಸುಜುಕಿ ಮೋಟರ್ ಸೈಕಲ್ಸ್ ಇಂಡಿಯಾ ಕಂಪನಿಯು ತನ್ನ ಬರ್ಗ್‌ಮನ್ ಸ್ಟ್ರೀಟ್ 125 ಪ್ರೀಮಿಯಂ ಸ್ಕೂಟರ್ ಅನ್ನು ಹೊಸ ಬಣ್ಣದಲ್ಲಿ ಬಿಡುಗಡೆಗೊಳಿಸಿದೆ. 2020ರ ಸುಜುಕಿ ಬರ್ಗ್‌ಮನ್ ಸ್ಟ್ರೀಟ್ 125 ಸ್ಕೂಟರ್ ಅನ್ನು ಪರ್ಲ್ ಸುಜುಕಿ ಮೀಡಿಯಮ್ ಬ್ಲೂ ಬಣ್ಣದಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಸ್ಕೂಟರಿನ ಬೆಲೆ ದೆಹಲಿಯ ಎಕ್ಸ್ ಶೋರೂಂ ದರದಂತೆ ರೂ.79,700ಗಳಾಗಿದೆ.

ಈ ವರ್ಷದ ಆರಂಭದಲ್ಲಿ ಬರ್ಗ್‌ಮನ್ ಸ್ಟ್ರೀಟ್ 125 ಸ್ಕೂಟರ್ ಅನ್ನು ಬಿಎಸ್ 6 ಮಾಲಿನ್ಯ ನಿಯಮಗಳಿಗೆ ಅನುಸಾರವಾಗಿ ಅಪ್ ಡೇಟ್ ಗೊಳಿಸಲಾಗಿತ್ತು. ಅಪ್ ಡೇಟ್ ನಂತರ ಈ ಸ್ಕೂಟರಿನಲ್ಲಿ 124 ಸಿಸಿಯ ಏರ್-ಕೂಲ್ಡ್ ಸಿಂಗಲ್ ಸಿಲಿಂಡರ್ ಎಂಜಿನ್ ಅನ್ನು ಮುಂದುವರೆಸಲಾಗಿದೆ.

Recommended