ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್ ಫಸ್ಟ್ ಡ್ರೈವ್ ರಿವ್ಯೂ

  • 3 years ago
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ತನ್ನ ಎಂಟ್ರಿ ಲೆವಲ್ ಎ-ಕ್ಲಾಸ್ ಲಿಮೋಸಿನ್ ಆವೃತ್ತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ಪರಿಚಯಿಸುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ಕಾರ್ಯಕ್ಷಮತೆ ಕುರಿತಂತೆ ಫಸ್ಟ್ ಡ್ರೈವ್ ಆಯೋಜಿಸಿತ್ತು. ಹೊಸ ಕಾರು ಇದೇ ತಿಂಗಳು 25ರಂದು ಮಾರುಕಟ್ಟೆ ಪ್ರವೇಶಿಸುವುದು ಖಚಿತವಾಗಿದ್ದು, ಎಂಟ್ರಿ ಲೆವಲ್ ಐಷಾರಾಮಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎ-ಕ್ಲಾಸ್ ಲಿಮೋಸಿನ್ ಕಾರು ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.
ಹೊಸ ಎ-ಕ್ಲಾಸ್ ಕಾರಿನಲ್ಲಿ 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಸ್ಟ್ಯಾಂಡರ್ಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದೆ. ಹಾಗಾದ್ರೆ ಎಂಟ್ರಿ ಲೆವಲ್ ಐಷಾರಾಮಿ ಕಾರಿನಲ್ಲಿ ಇನ್ನು ಏನೆಲ್ಲಾ ವಿಶೇಷತೆಗಳಿವೆ ಎಂಬುವುದನ್ನು ಈ ರಿವ್ಯೂ ವಿಡಿಯೋದಲ್ಲಿ ತಿಳಿಯೋಣ.