Demand for home minister resignation

  • 3 years ago
ರೈತರ ಮೇಲೆ ದಾಳಿ: ಗೃಹಸಚಿವರ ರಾಜೀನಾಮೆಗೆ ಒತ್ತಾಯ

ಬೆಂಗಳೂರು: ಬೆಳಗಾವಿಯಲ್ಲಿ ಸರ್ಕಾರ ರೈತರ ಮೇಲೆ ನಡೆಸಿದ ದೌರ್ಜನ್ಯವನ್ನು ಕರ್ನಾಟಕ ಕಿಸಾನ್ ಕಾಂಗ್ರೆಸ್ ತೀವ್ರವಾಗಿ ಕಂಡಿಸುತ್ತದೆ. ಈಗಾಗಲೇ ಕೇಂದ್ರದ ಬಿಜೆಪಿ ಸರ್ಕಾರದ ಮಂತ್ರಿಗಳು ರೈತರನ್ನು ಕೊಲೆಮಾಡಿದ್ದಾರೆ. ಅದೇ ದಾರಿಯಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಪೊಲೀಸ್ ಪಡೆ ಮುಖಾಂತರ ದೌರ್ಜನ್ಯ ನಡೆಸಿದ್ದಾರೆ. ಪದೇ ಪದೇ ರೈತರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳನ್ನು ಸಹಿಸಲು ಸಾಧ್ಯವಿಲ್ಲ. ಕೂಡಲೇ ಈ ರಾಜ್ಯದ ಗ್ರಹಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರೈತರ ಮೇಲೆ ಅಮಾನುಷವಾಗಿ ವರ್ತಿಸಿದ ಪೊಲೀಸ್ ಅಧಿಕಾರಿಗಳನ್ನು ಅಮಾನತ್ ಮಾಡಬೇಕು ಎಂದು ಕೆಪಿಸಿಸಿ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಒತ್ತಾಯಿಸಿದ್ದಾರೆ.