News Cafe | BJP Names Droupadi Murmu As Its Presidential Candidate | June 22, 2022
  • 2 years ago
ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಧಿಕೃತವಾಗಿ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು ಅವರನ್ನು ಎನ್‍ಡಿಎ ತನ್ನ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಎಂದು ಘೋಷಿಸಿದೆ. ಪ್ರಧಾನಿ ನರೇಂದ್ರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಹೆಸರನ್ನು ಅಂತಿಮಗೊಳಿಸಲಾಯಿಗಿದೆ. ಜೂನ್ 25ಕ್ಕೆ ಮುರ್ಮು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. . ಜಾರ್ಖಂಡ್‍ನ ಮೊದಲ ಮಹಿಳಾ ರಾಜ್ಯಪಾಲೆಯಾಗಿದ್ದ ಮುರ್ಮು, ಒಡಿಶಾದಲ್ಲಿ ಶಾಸಕಿಯಾಗಿ, ಸಚಿವೆಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರು ವಾಜಪೇಯಿ ನೇತೃತ್ವದ ಸರ್ಕಾರದಲ್ಲೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. 64 ವರ್ಷದ ದ್ರೌಪದಿ ಮುರ್ಮು ಬುಡಕಟ್ಟು ಸಮುದಾಯವನ್ನು ಪ್ರತಿನಿಧಿಸುತ್ತಾರೆ. ಬುಡಕಟ್ಟು ಮಹಿಳೆಗೆ ಅವಕಾಶ ನೀಡುವ ಮೂಲಕ ಬಿಜೆಪಿ ಜಾಣ ನಡೆ ಇಟ್ಟಿದೆ. ವಿಪಕ್ಷಗಳಿಂದ ಅಭ್ಯರ್ಥಿಯಾಗಿರುವ ಯಶವಂತ ಸಿನ್ಹಾ ವಿರುದ್ಧ ಮುರ್ಮು ಚುನಾವಣೆ ಎದುರಿಸಲಿದ್ದು ಬಹುತೇಕ ಗೆಲುವು ಸಾಧಿಸುವ ಸಾಧ್ಯತೆಗಳು ಹೆಚ್ಚಿದೆ. ಒಂದು ವೇಳೆ ಗೆಲವು ಸಾಧಿಸಿದ್ದಲ್ಲಿ ಪ್ರತಿಭಾ ಪಾಟೀಲ್ ಬಳಿಕ ರಾಷ್ಟ್ರಪತಿಯಾಗುತ್ತಿರುವ ಎರಡನೇ ಮಹಿಳೆಯಾಗಲಿದ್ದಾರೆ. ಜುಲೈ 18 ರಂದು ಚುನಾವಣೆ ನಡೆಯಲಿದ್ದು 21 ರಂದು ಫಲಿತಾಂಶ ಪ್ರಕಟವಾಗಲಿದೆ. ಇನ್ನು ಮೋದಿ ಸಹ ಟ್ವೀಟ್ ಮೂಲಕ ಶುಭ ಕೋರಿದ್ದು ದ್ರೌಪದಿ ಮುರ್ಮುರಿಗೆ ಉತ್ತಮ ಆಡಳಿತಾತ್ಮಕ ಅನುಭವ ಹೊಂದಿದ್ದಾರೆ. ಬಡವರ ಏಳಿಗೆಗೆ ಶ್ರಮಿಸಿದ್ದಾರೆ ಅಂದಿದ್ದಾರೆ. ದ್ರೌಪದಿ ಮುರ್ಮು ಅವರ ರಾಜಕೀಯ ಜರ್ನಿ ನೋಡೋದಾದ್ರೆ...

#publictv #newscafe
Recommended