Skip to playerSkip to main contentSkip to footer
  • 7/25/2022
ದೇಶದ 15ನೇ ರಾಷ್ಟ್ರಪತಿ, ಪ್ರಥಮ ಪ್ರಜೆಯಾಗಿ ಇಂದು ಬೆಳಗ್ಗೆ 10.15ಕ್ಕೆ ದ್ರೌಪದಿ ಮುರ್ಮು ಅಧಿಕಾರ ಸ್ವೀಕರಿಸಲಿದ್ದಾರೆ. ಸಾಮಾನ್ಯ ಶಿಕ್ಷಕಿಯಾಗಿದ್ದ ಬುಡಕಟ್ಟು ಸಮುದಾಯದ ಮುರ್ಮು ಅವರು ಸಂಸತ್‍ನ ಸೆಂಟ್ರಲ್ ಹಾಲ್‍ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎನ್.ವಿ ರಮಣ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ. ಪ್ರಧಾನಿ ಮೋದಿ ಆದಿಯಾಗಿ ಸಚಿವರು, ಬಿಜೆಪಿಯ ಎಲ್ಲ ಸಂಸದರು ಈ ವೇಳೆ ಉಪಸ್ಥಿತರಿರುತ್ತಾರೆ...ದ್ರೌಪದಿ ಮುರ್ಮು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಪೋಸಿ ಗ್ರಾಮದವರು, 20 ಜೂನ್ 1958 ಜನಿಸಿದ ಅವರು ಶಿಕ್ಷಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಮುರ್ಮು ದೇಶದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಯಾಗಿದ್ದು, ಸ್ವಾತಂತ್ರ್ಯೊತ್ತರ ಜನಿಸಿದ ವ್ಯಕ್ತಿಯೊಬ್ಬರು ರಾಷ್ಟ್ರಪತಿಯಾಗಿತ್ತಿರುವುದು ಇದೇ ಮೊದಲು.

#publictv #hrranganath #newscafe

Category

🗞
News

Recommended